ಯೆರೆಮೀಯ 34:17 - ಪರಿಶುದ್ದ ಬೈಬಲ್17 “ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.
“ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?”