ಯೆರೆಮೀಯ 34:2 - ಪರಿಶುದ್ದ ಬೈಬಲ್2 ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಈ ಸಂದೇಶವನ್ನು ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಬ್ರದಲ್ಲಿ ನಾನು ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನ್ನು ಸುಟ್ಟುಬಿಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಇಸ್ರಯೇಲರ ದೇವರಾದ ಸರ್ವೇಶ್ವರನಾದ ನನ್ನ ನುಡಿ ಇದು: ನೀನು ಜುದೇಯದ ಅರಸ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆಂದು ಹೇಳು - ‘ಸರ್ವೇಶ್ವರನ ಮಾತನ್ನು ಆಲಿಸು: ಇಗೋ, ನಾನು ಈ ನಗರವನ್ನು ಬಾಬಿಲೋನಿನ ಅರಸನ ಕೈವಶಮಾಡುವೆನು. ಅವನು ಇದನ್ನು ಬೆಂಕಿಯಿಂದ ಸುಟ್ಟುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು - ಯೆಹೋವನ ಮಾತನ್ನು ಆಲಿಸು - ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.
ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.