ಯೆರೆಮೀಯ 34:20 - ಪರಿಶುದ್ದ ಬೈಬಲ್20 ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು. ಅಧ್ಯಾಯವನ್ನು ನೋಡಿ |
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.
ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’”
ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.