ಯೆರೆಮೀಯ 34:3 - ಪರಿಶುದ್ದ ಬೈಬಲ್3 ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಂಧಿತನಾಗಿ ಅವನ ವಶವಾಗುವೆ. ಬಾಬಿಲೋನಿನ ಅರಸನ ಸಮಕ್ಷಮದಲ್ಲಿ ನಿಲ್ಲುವೆ. ಅವನು ನಿನ್ನೊಡನೆ ಮುಖಾಮುಖಿಯಾಗಿ ಮಾತಾಡುವನು. ನೀನು ಬಾಬಿಲೋನಿಗೆ ಗಡಿಪಾರಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತಾಡುವನು; ನೀನು ಬಾಬೆಲಿಗೆ ಗಡೀಪಾರಾಗುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ. ಅಧ್ಯಾಯವನ್ನು ನೋಡಿ |
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’