ಯೆರೆಮೀಯ 34:4 - ಪರಿಶುದ್ದ ಬೈಬಲ್4 ಯೆಹೂದದ ರಾಜನಾದ ಚಿದ್ಕೀಯನೇ, ಯೆಹೋವನ ವಾಗ್ದಾನವನ್ನು ಕೇಳು. ಯೆಹೋವನು ನಿನ್ನ ಬಗ್ಗೆ ಹೀಗೆ ಹೇಳುತ್ತಾನೆ. ನಿನ್ನನ್ನು ಖಡ್ಗದಿಂದ ಕೊಲ್ಲಲಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೂ ಜುದೇಯದ ಅರಸನಾದ ಚಿದ್ಕೀಯನೇ, ಸರ್ವೇಶ್ವರನ ಮಾತನ್ನು ಕೈಗೊಳ್ಳು; ಸರ್ವೇಶ್ವರ ನಿನ್ನ ವಿಷಯವಾಗಿ ಹೀಗೆನ್ನುತ್ತಾರೆ - ನೀನು ಕತ್ತಿಯಿಂದ ಹತನಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಕೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ - [ನೀನು ಕೇಳಿ ಕೈಕೊಂಡರೆ] ಖಡ್ಗದಿಂದ ಹತನಾಗುವದಿಲ್ಲ; ಸುಖವಾಗಿ ಸಾಯುವಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ ‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ. ಅಧ್ಯಾಯವನ್ನು ನೋಡಿ |
ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸ್ವತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’” ಇದು ಯೆಹೋವನ ನುಡಿ.