5 ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸ್ವತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’” ಇದು ಯೆಹೋವನ ನುಡಿ.
5 ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’” ಎಂದನು.
5 ನೆಮ್ಮದಿಯಿಂದ ಸಾಯುವೆ. ನಿನಗಿಂತ ಮುಂಚೆ, ನಿನ್ನ ಪೂರ್ವಜರಾದ ದಿವಂಗತ ಅರಸರ ಸ್ಮರಣಾರ್ಥ ಜನರು ಧೂಪಹಾಕಿದ ಪ್ರಕಾರ ನಿನಗೂ ಹಾಕುವರು. ‘ಅಯ್ಯೋ ಒಡೆಯಾ’ ಎಂದು ನಿನಗಾಗಿ ಗೋಳಾಡುವರು. ಇದು ನನ್ನ ನುಡಿ,’ ಎಂದಿದ್ದಾರೆ ಸರ್ವೇಶ್ವರ.”
5 ನಿನಗಿಂತ ಮುಂಚಿನ ನಿನ್ನ ಪಿತೃಗಳಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.
5 ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’ ”
ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.
ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳಧೂಪವನ್ನು ಸುಟ್ಟರು.
ಆಗ ಅರಸನಾದ ನೆಬೂಕದ್ನೆಚ್ಚರನು ದಾನಿಯೇಲನ ಮುಂದೆ ಅಡ್ಡಬಿದ್ದು ಅವನನ್ನು ಹೊಗಳಿದನು; ಅವನ ಗೌರವಾರ್ಥವಾಗಿ ಧೂಪಹಾಕಿ ನೈವೇದ್ಯಮಾಡಬೇಕೆಂದು ಆಜ್ಞಾಪಿಸಿದನು. ಆಮೇಲೆ ಅರಸನು ದಾನಿಯೇಲನಿಗೆ,
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು.
ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.
ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.’” ಹಿಲ್ಕೀಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು.
‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.
ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.