Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:9 - ಪರಿಶುದ್ದ ಬೈಬಲ್‌

9 ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ದಾಸದಾಸಿಯರನ್ನು ಬಿಡುಗಡೆ ಮಾಡಬೇಕಾಗಿತ್ತು. ಯೆಹೂದದ ಕುಲದ ಯಾರನ್ನೂ ಗುಲಾಮರನ್ನಾಗಿ ಇಟ್ಟುಕೊಳ್ಳುವಂತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದರ ಪ್ರಕಾರ ಅವರಲ್ಲಿ ಪ್ರತಿ ಒಬ್ಬನು ತನ್ನ ಜೀತದಾರರಲ್ಲಿ ಹಿಬ್ರಿಯರಾದವರನ್ನು ಬಿಡುಗಡೆಮಾಡಬೇಕಿತ್ತು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಇನ್ನು ಮುಂದೆ ಜೀತದಾರರನ್ನಾಗಿ ಇರಿಸಿಕೊಳ್ಳದೆ ಅವರಿಗೆ ವಿಮೋಚನೆಯನ್ನು ಪ್ರಕಟಿಸಬೇಕೆಂಬುದು ಆ ಒಪ್ಪಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವದಿಲ್ಲ ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪ್ರತಿಯೊಬ್ಬರೂ ತಮ್ಮ ಗಂಡು ಮತ್ತು ಹೆಣ್ಣು ಹಿಬ್ರಿಯ ಗುಲಾಮರನ್ನು ಇಬ್ಬರನ್ನೂ ಮುಕ್ತಗೊಳಿಸಬೇಕು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಬಂಧನದಲ್ಲಿ ಇಟ್ಟುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:9
16 ತಿಳಿವುಗಳ ಹೋಲಿಕೆ  

ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು;


ಆ ಜನರು ಇಬ್ರಿಯರೇ? ನಾನು ಸಹ ಇಬ್ರಿಯನು. ಅವರು ಇಸ್ರೇಲರೇ? ನಾನು ಸಹ ಇಸ್ರೇಲನು. ಅವರು ಅಬ್ರಹಾಮನ ಕುಟುಂಬಕ್ಕೆ ಸೇರಿದವರೇ? ನಾನು ಸಹ ಅಬ್ರಹಾಮನ ಕುಟುಂಬಕ್ಕೆ ಸೇರಿದವನು.


ಆದರೆ ಸ್ವತಃ ನೀವೇ ಕೆಟ್ಟದ್ದನ್ನು ಮಾಡುತ್ತೀರಿ ಮತ್ತು ಮೋಸ ಮಾಡುತ್ತೀರಿ! ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನಿಗೇ ನೀವು ಹೀಗೆ ಮಾಡುತ್ತೀರಿ.


ಆದ್ದರಿಂದ ಯೆಹೂದದ ಸಮಸ್ತ ಮುಖಂಡರು ಮತ್ತು ಎಲ್ಲಾ ಜನರು ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿಯೂ ಅವರಿಂದ ಮುಂದೆ ಕೆಲಸ ಮಾಡಿಸುವದಿಲ್ಲ ಎಂಬುದಾಗಿಯೂ ಒಪ್ಪಿಕೊಂಡರು. ಆದ್ದರಿಂದ ಎಲ್ಲಾ ಗುಲಾಮರನ್ನು ಬಿಡುಗಡೆ ಮಾಡಲಾಯಿತು.


ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.


ಎಲ್ಲಾ ಜನಾಂಗಗಳು ನೆಬೂಕದ್ನೆಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಬಾಬಿಲೋನನ್ನು ಸೋಲಿಸುವ ಸಮಯ ಬರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಬಾಬಿಲೋನನ್ನು ತಮ್ಮ ಸೇವಕನನ್ನಾಗಿ ಮಾಡಿಕೊಳ್ಳುವರು.


ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”


ಹೀಗೆ ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರಿಗೆ ಕಾಣಿಸಿಕೊಂಡರು. ಫಿಲಿಷ್ಟಿಯರ ಕಾವಲುಗಾರರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಬರುತ್ತಿದ್ದಾರೆ” ಎಂದು ಹೇಳಿದರು.


ಫಿಲಿಷ್ಟಿಯರೇ, ಧೈರ್ಯದಿಂದಿರಿ! ಶೂರರಂತೆ ಹೋರಾಡಿ! ಇಬ್ರಿಯರು ಪುರಾತನ ಕಾಲದಲ್ಲಿ ನಮಗೆ ಗುಲಾಮರಾಗಿದ್ದರು. ಆದಕಾರಣ ಶೂರರಂತೆ ಹೋರಾಡಿರಿ, ಇಲ್ಲವಾದರೆ ನೀವು ಅವರಿಗೆ ಗುಲಾಮರಾಗುವಿರಿ!” ಎಂದು ಹೇಳಿದರು.


ಇಸ್ರೇಲರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿಸಿತು. “ಇಬ್ರಿಯರ ಪಾಳೆಯದಲ್ಲಿ ಆಗುತ್ತಿರುವ ಆರ್ಭಟಕ್ಕೆ ಕಾರಣವೇನು?” ಎಂದು ಅವರು ಕೇಳಿದರು. ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಇಸ್ರೇಲರ ಪಾಳೆಯಕ್ಕೆ ತಂದಿರುವುದೇ ಅವರ ಆರ್ಭಟಕ್ಕೆ ಕಾರಣವೆಂದು ಫಿಲಿಷ್ಟಿಯರಿಗೆ ತಿಳಿದು ಬಂದಿತು.


“ನೀವು ಹೀಬ್ರೂ ಮನುಷ್ಯನನ್ನೋ ಸ್ತ್ರೀಯನ್ನೋ ನಿಮ್ಮ ಗುಲಾಮರಾಗಿ ಕ್ರಯಕ್ಕೆ ತೆಗೆದುಕೊಳ್ಳಬಹುದು. ಅವರನ್ನು ನಿಮ್ಮ ಗುಲಾಮರಾಗಿ ಆರು ವರ್ಷಗಳ ಕಾಲ ಇಟ್ಟುಕೊಳ್ಳಬಹುದು. ಆದರೆ ಏಳನೆಯ ವರ್ಷದಲ್ಲಿ ನೀವು ಅವರನ್ನು ಸ್ವತಂತ್ರರಾಗಿ ಬಿಟ್ಟುಬಿಡಬೇಕು.


“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.


ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.


ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.


ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು