ಯೆರೆಮೀಯ 35:1 - ಪರಿಶುದ್ದ ಬೈಬಲ್1 ಯೆಹೋಯಾಕೀಮನು ಯೆಹೂದವನ್ನು ಆಳುತ್ತಿದ್ದ ಕಾಲದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಯೆಹೋವನ ಸಂದೇಶ ಹೀಗಿತ್ತು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೋಷೀಯನ ಮಗನಾದ ಜುದೇಯದ ಅರಸ ಯೆಹೋಯಾಕೀಮನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಷೀಯನ ಮಗನಾದ ಯೆಹೂದದ ಅರಸ ಯೆಹೋಯಾಕೀಮನ ಕಾಲದಲ್ಲಿ ಯೆರೆಮೀಯನಾದ ನನಗೆ ಯೆಹೋವ ದೇವರಿಂದ ಬಂದ ವಾಕ್ಯ ಇದು: ಅಧ್ಯಾಯವನ್ನು ನೋಡಿ |
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.
ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:
ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.