ಯೆರೆಮೀಯ 35:13 - ಪರಿಶುದ್ದ ಬೈಬಲ್13 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಬೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಹೋಗಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಹೇಳು - [ಇದರಿಂದ] ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವದಿಲ್ಲವೋ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ. ಅಧ್ಯಾಯವನ್ನು ನೋಡಿ |