Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:14 - ಪರಿಶುದ್ದ ಬೈಬಲ್‌

14 ‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ರೇಕಾಬನ ಮಗ ಯೆಹೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:14
15 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಅವರಿಗೆ ಒಂದು ಮುನ್ನೆಚ್ಚರಿಕೆಯನ್ನು ಕೊಟ್ಟೆನು. ಇಂದಿನವರೆಗೂ ನಾನು ಮತ್ತೆಮತ್ತೆ ಅವರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟೆ. ನನ್ನ ಆಜ್ಞಾಪಾಲನೆ ಮಾಡಬೇಕೆಂದು ಅವರಿಗೆ ಹೇಳಿದೆ.


ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಈ ಜನರು ಹೆತ್ತವರಿಗೆ ವಿಧೇಯರಾಗದ ಮಕ್ಕಳಂತಿದ್ದಾರೆ. ಅವರು ಸುಳ್ಳಾಡಿಕೊಂಡು ಯೆಹೋವನ ಬೋಧನೆಯನ್ನು ನಿರಾಕರಿಸುತ್ತಾರೆ.


“ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.


ಜೆರುಸಲೇಮಿನವರು ನನ್ನ ಸಂದೇಶಕ್ಕೆ ಕಿವಿಗೊಟ್ಟಿಲ್ಲವಾದ ಕಾರಣ ನಾನು ಹಾಗೆಲ್ಲ ನಡೆಯುವಂತೆ ಮಾಡುವೆನು” ಇದು ಯೆಹೋವನ ನುಡಿ. “ನಾನು ಮತ್ತೆಮತ್ತೆ ನನ್ನ ಸಂದೇಶವನ್ನು ಅವರಿಗೆ ಕೊಟ್ಟೆ. ಆ ಜನರಿಗೆ ಸಂದೇಶಗಳನ್ನು ಕೊಡುವದಕ್ಕಾಗಿ ನನ್ನ ಸೇವಕರಾದ ಪ್ರವಾದಿಗಳನ್ನು ಉಪಯೋಗಿಸಿಕೊಂಡೆ. ಆದರೆ ಆ ಜನರು ಕೇಳಲಿಲ್ಲ.” ಇದು ಯೆಹೋವನ ನುಡಿ.


“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ನನ್ನ ಸೇವಕರು ಹೇಳುವುದನ್ನು ನೀವು ಕೇಳಬೇಕು. ಪ್ರವಾದಿಗಳು ನನ್ನ ಸೇವಕರಾಗಿದ್ದಾರೆ. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ನಿಮ್ಮಲ್ಲಿಗೆ ಕಳುಹಿಸಿದೆನು. ಆದರೆ ನೀವು ಅವರ ಮಾತುಗಳಿಗೆ ಕಿವಿಗೊಡಲಿಲ್ಲ.


ಆದರೆ ರೇಕಾಬ್ಯರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ. ಏಕೆಂದರೆ ನಮ್ಮ ಪೂರ್ವಿಕನಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವು ಮತ್ತು ನಿಮ್ಮ ಸಂತಾನದವರು ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬಾರದು.


ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರು ವಿಧಿಸಿದ ಆಜ್ಞೆಗಳನ್ನು ಪಾಲಿಸಿದರು. ಆದರೆ ಯೆಹೂದದ ಜನರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು