ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.
‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.
ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು.