Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:18 - ಪರಿಶುದ್ದ ಬೈಬಲ್‌

18 ಅನಂತರ ಯೆರೆಮೀಯನು ರೇಕಾಬ್ಯರಿಗೆ ಹೀಗೆ ಹೇಳಿದನು, “ಸರ್ವಶಕ್ತನಾದ ಯೆಹೋವನು, ಇಸ್ರೇಲಿನ ದೇವರು ಹೀಗೆ ಹೇಳುತ್ತಾನೆ. ‘ನೀವು ನಿಮ್ಮ ಪೂರ್ವಿಕನಾದ ಯೋನಾದಾಬನ ಆಜ್ಞೆಗಳನ್ನು ಪಾಲಿಸಿದ್ದೀರಿ. ನೀವು ಯೋನಾದಾಬನ ಎಲ್ಲಾ ಉಪದೇಶಗಳನ್ನು ಅನುಸರಿಸಿದ್ದೀರಿ. ನೀವು ಅವನು ವಿಧಿಸಿದಂತೆ ಎಲ್ಲವನ್ನು ಮಾಡಿದ್ದೀರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮತ್ತು ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೆರೆಮೀಯನು ರೇಕಾಬ್ಯರಿಗೆ, “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನೀವು ನಿಮ್ಮ ಪೂರ್ವಜ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲ ನೆರವೇರಿಸಿದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ಯೆರೆಮೀಯನು ರೇಕಾಬ್ಯರಿಗೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆನ್ನುತ್ತಾರೆ: ನೀವು ನಿಮ್ಮ ಪೂರ್ವಜನಾದ ಯೆಹೋನಾದಾಬನ ಅಪ್ಪಣೆಯನ್ನು ಕೇಳಿ, ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:18
4 ತಿಳಿವುಗಳ ಹೋಲಿಕೆ  

‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.


“ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.


ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು