Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:3 - ಪರಿಶುದ್ದ ಬೈಬಲ್‌

3 ಆದ್ದರಿಂದ ನಾನು (ಯೆರೆಮೀಯನು) ಯಾಜನ್ಯನನ್ನು ಕರೆಯಲು ಹೋದೆನು. ಯಾಜನ್ಯನು ಯೆರೆಮೀಯನೆಂಬುವನ ಮಗ. ಯೆರೆಮೀಯನು ಹಬಚ್ಚಿನ್ಯನ ಮಗ. ನಾನು ಯಾಜನ್ಯನ ಎಲ್ಲಾ ಸಹೋದರರನ್ನೂ ಮಕ್ಕಳನ್ನೂ ಕರೆತಂದೆನು. ನಾನು ರೇಕಾಬ್ಯರ ಇಡೀ ಮನೆತನವನ್ನು ಒಟ್ಟಿಗೆ ಸೇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೆ ನಾನು (ಮತ್ತೊಬ್ಬ) ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ ಸರ್ವೇಶ್ವರನಾಲಯಕ್ಕೆ ಕರೆದೊಯ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಾನು ಹಬಚ್ಚಿನ್ಯನ ಮಗ, ಯೆರೆಮೀಯನ ಮಗನಾದ, ಯಾಜನ್ಯನೂ, ಅವನ ಸಹೋದರರನ್ನೂ, ಅವನ ಪುತ್ರರೆಲ್ಲರನ್ನೂ ರೇಕಾಬನ ಸಮಸ್ತ ಮನೆಯವರನ್ನೂ ಕರೆಯುವುದಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:3
2 ತಿಳಿವುಗಳ ಹೋಲಿಕೆ  

“ಯೆರೆಮೀಯನೇ, ರೇಕಾಬನ ಕುಟುಂಬದವರಲ್ಲಿಗೆ ಹೋಗು. ಅವರನ್ನು ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನ್ನು ಕೊಡು.”


ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು