ಯೆರೆಮೀಯ 35:4 - ಪರಿಶುದ್ದ ಬೈಬಲ್4 ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು, ಅಧ್ಯಾಯವನ್ನು ನೋಡಿ |
ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.
ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ರಂಧ್ರ ಮಾಡಿದನು. ನಂತರ ಯೆಹೋಯಾದಾವನು ಆ ಪೆಟ್ಟಿಗೆಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಈ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಆ ಯಾಜಕರು ಜನರು ಯೆಹೋವನಿಗೆಂದು ಕೊಡುವ ಆ ಹಣವನ್ನು ಪೆಟ್ಟಿಗೆಯಲ್ಲಿ ಹಾಕಿದರು.
ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವುಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನವಾಯಿತು. ಆದ್ದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.