Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:8 - ಪರಿಶುದ್ದ ಬೈಬಲ್‌

8 ಆದ್ದರಿಂದ ರೇಕಾಬ್ಯರಾದ ನಾವು ನಮ್ಮ ಪೂರ್ವಿಕನಾದ ಯೋನಾದಾಬನು ಕೊಟ್ಟ ಆಜ್ಞೆಯನ್ನು ಸಂಪೂರ್ಣವಾಗಿ ಪಾಲಿಸಿದ್ದೇವೆ. ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಹೆಂಡತಿಯರು ಮತ್ತು ಮಕ್ಕಳು ಸಹ ಎಂದೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲಾ ವಿಷಯದಲ್ಲಿಯೂ ಕೈಕೊಳ್ಳುತ್ತಿದ್ದೇವೆ; ನಾವಾಗಲಿ ನಮ್ಮ ಹೆಂಡರಾಗಲಿ ಗಂಡು ಹೆಣ್ಣು ಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಪ್ರಕಾರ ನಾವು ನಮ್ಮ ಪೂರ್ವಜನಾದ ರೇಕಾಬನ ಮಗ ಯೆಹೋನಾದಾಬನ ಮಾತನ್ನು, ಅವನು ನಮಗೆ ಆಜ್ಞಾಪಿಸಿದ್ದೆಲ್ಲದರಲ್ಲಿ ನಾವೂ, ನಮ್ಮ ಹೆಂಡತಿಯರೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ನಮ್ಮ ದಿವಸಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:8
7 ತಿಳಿವುಗಳ ಹೋಲಿಕೆ  

ಮಕ್ಕಳೇ, ನಿಮ್ಮ ತಂದೆತಾಯಿಗಳಿಗೆ ಎಲ್ಲಾ ವಿಷಯಗಳಲ್ಲಿಯೂ ವಿಧೇಯರಾಗಿರಿ. ಇದು ಪ್ರಭುವಿಗೆ ಸಂತೋಷವನ್ನು ಉಂಟುಮಾಡುವುದು.


ನನ್ನ ಮಗನೇ, ನಿನ್ನ ತಂದೆಯ ಆಜ್ಞೆಗಳನ್ನು ಜ್ಞಾಪಕಮಾಡಿಕೋ. ನಿನ್ನ ತಾಯಿಯ ಉಪದೇಶಗಳನ್ನು ಮರೆಯಬೇಡ.


ಮಗನೇ, ನನ್ನ ಮಾತನ್ನು ಕೇಳು. ನಾನು ಹೇಳಿದಂತೆ ಮಾಡು, ಆಗ ನೀನು ಬಹುಕಾಲ ಬದುಕುವೆ.


ಜ್ಞಾನಿಯಾದ ಮಗನು ತನ್ನ ತಂದೆಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳುತ್ತಾನೆ. ಆದರೆ ದುರಾಭಿಮಾನಿಯು ಕೇಳುವುದಿಲ್ಲ.


ಮಕ್ಕಳೇ, ಪ್ರಭುವಿನ ಚಿತ್ತಕ್ಕನುಸಾರವಾಗಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಅದು ನ್ಯಾಯಬದ್ಧವಾದದ್ದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು