Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:10 - ಪರಿಶುದ್ದ ಬೈಬಲ್‌

10 ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಬಾರೂಕನು ಸರ್ವೇಶ್ವರನ ಆಲಯದೊಳಗೆ, ಮೇಲಣ ಪ್ರಾಕಾರದಲ್ಲಿ, ಹೊಸಬಾಗಿಲ ಹತ್ತಿರ, ಲೇಖಕ ಶಾಫಾನನ ಮಗ ಗೆಮರ್ಯನ ಕೊಠಡಿಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಜನರೆಲ್ಲರಿಗೂ ಕೇಳಿಸುವಂತೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಬಾರೂಕನು ಪುಸ್ತಕದಿಂದ ಯೆರೆಮೀಯನ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಲೇಖಕನಾಗಿರುವ ಶಾಫಾನನ ಮಗನಾಗಿರುವ ಗೆಮರೀಯನ ಕೊಠಡಿಯಲ್ಲಿ ಮೇಲಿನ ಅಂಗಳದಲ್ಲಿ, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರು ಕೇಳುವಂತೆ ಓದಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:10
17 ತಿಳಿವುಗಳ ಹೋಲಿಕೆ  

ಬಾರೂಕನು ಓದಿದ ಎಲ್ಲಾ ಯೆಹೋವನ ಸಂದೇಶಗಳನ್ನು ಮೀಕಾಯನೆಂಬ ಒಬ್ಬ ಮನುಷ್ಯನು ಕೇಳಿಸಿಕೊಂಡನು. ಮೀಕಾಯನು ಶಾಫಾನನ ಮಗನಾದ ಗೆಮರ್ಯನ ಮಗನಾಗಿದ್ದನು.


ರಾಜನ ವಿಶೇಷ ರಕ್ಷಕದಳದ ಅಧಿಪತಿಯು ಸೈನ್ಯದ ವ್ಯವಸ್ಥಾಪಕನ ಅಧಿಕಾರಿಯನ್ನು ಬಂಧಿಸಿದನು. ಅವನು ರಾಜನ ಏಳು ಜನ ಆಪ್ತ ಮಂತ್ರಿಗಳನ್ನು ಸಹ ಸೆರೆಹಿಡಿದನು. ಅವರೆಲ್ಲ ಇನ್ನೂ ಜೆರುಸಲೇಮಿನಲ್ಲಿದ್ದರು. ಯುದ್ಧಕ್ಕೆ ಹೋಗುವವರ ಪಟ್ಟಿಯನ್ನು ಮಾಡುವ ಲಿಪಿಗಾರನನ್ನು ಸಹ ಅವನು ಸೆರೆಹಿಡಿದನು. ನಗರದಲ್ಲಿದ್ದ ಅರವತ್ತು ಮಂದಿ ಜನಸಾಮಾನ್ಯರನ್ನು ಸಹ ಅವನು ಸೆರೆಹಿಡಿದನು.


ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದದ ಅಧಿಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಬಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.


ಎಲ್ನಾಥಾನನೂ ದೆಲಾಯನೂ ಗೆಮರ್ಯನೂ ಅದನ್ನು ಸುಡಬೇಡವೆಂದು ರಾಜನಿಗೆ ಹೇಳುವ ಪ್ರಯತ್ನ ಮಾಡಿದರು. ಆದರೆ ರಾಜನು ಅವರ ಮಾತನ್ನು ಕೇಳಲಿಲ್ಲ.


ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.


ಪ್ರವಾದಿಯಾದ ಯೆರೆಮೀಯನು ತನಗೆ ಮಾಡಲು ಹೇಳಿದಂತೆ ನೇರೀಯನ ಮಗನಾದ ಬಾರೂಕನು ಮಾಡಿದನು. ಬಾರೂಕನು ಸುರುಳಿಯ ಮೇಲೆ ಬರೆದ ಯೆಹೋವನ ಸಂದೇಶಗಳನ್ನು ಗಟ್ಟಿಯಾಗಿ ಯೆಹೋವನ ಆಲಯದಲ್ಲಿ ಓದಿದನು.


ಆದ್ದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಬಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನ್ನು ಓದು.


ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.


ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಬೂಕದ್ನೆಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:


ಶಾಫಾನನ ಮಗನಾದ ಅಹೀಕಾಮನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಹೀಕಾಮನು ಯೆರೆಮೀಯನಿಗೆ ಬೆಂಬಲ ಕೊಟ್ಟನು; ಯಾಜಕರು ಮತ್ತು ಪ್ರವಾದಿಗಳು ಅವನನ್ನು ಕೊಲ್ಲದಂತೆ ಕಾಪಾಡಿದರು.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಹಿಜ್ಕೀಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶ್ಶೂರದ ಸೇನಾಧಿಪತಿಯಾದ ರಬ್ಷಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಕೀಯನಿಗೆ ತಿಳಿಸಿದರು.


ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು. ಯೋತಾಮನು ಯೆಹೋವನ ಆಲಯಕ್ಕೆ ಮೇಲ್ಬಾಗಿಲನ್ನು ನಿರ್ಮಿಸಿದನು.


ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕ್ ಮತ್ತು ಎಬ್ಯಾತಾರರು ಯಾಜಕರಾಗಿದ್ದರು.


ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು.


ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಬಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಬುದು ನಮ್ಮ ಆಲೋಚನೆ. ಅವನು ನಮ್ಮನ್ನು ಬಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಬಯಸುತ್ತಾನೆ ಅಥವಾ ಅವರು ನಮ್ಮನ್ನು ಸೆರೆಹಿಡಿದು ಬಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಬಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು.


ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.


ಯೋಷೀಯನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಕಾರ್ಯದರ್ಶಿಯೂ ಆದ ಶಾಫಾನನನ್ನು ದೇವಾಲಯಕ್ಕೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು