ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.
ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಕೆಲವು ಜನರನ್ನು ಬಿಟ್ಟನು. ಅವನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದಲ್ಲಿ ಜನರಿಗೆ ರಾಜ್ಯಪಾಲನನ್ನಾಗಿ ಮಾಡಿದನು.