Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:14 - ಪರಿಶುದ್ದ ಬೈಬಲ್‌

14 ಆಗ ಆ ಅಧಿಕಾರಿಗಳೆಲ್ಲ ಯೆಹೂದಿ ಎಂಬುವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು. ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಧಿಕಾರಿಗಳ ಹತ್ತಿರಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಧಿಕಾರಿಗಳೆಲ್ಲರು ಸೇರಿ, ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯನನ್ನು ಬಾರೂಕನ ಬಳಿಗೆ ಕಳಿಸಿದರು. ‘ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ’ ಎಂದು ಹೇಳಿ ಕಳಿಸಿದರು. ಅಂತೆಯೆ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಕಲ ಪ್ರಧಾನರು ಬಾರೂಕನಿಗೆ - ನೀನು ಜನರ ಮುಂದೆ ಓದಿದ ಸುರಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಧಿಕಾರಿಗಳೆಲ್ಲರು ಸೇರಿ ನೆತನ್ಯನ ಮಗನೂ, ಶೆಲೆಮ್ಯನ ಮೊಮ್ಮಗನೂ, ಕೂಷಿಯ ಮರಿಮಗನೂ ಆದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿದನು. “ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ,” ಎಂದು ಹೇಳಿ ಕಳುಹಿಸಿದರು. ಅಂತೆಯೇ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:14
12 ತಿಳಿವುಗಳ ಹೋಲಿಕೆ  

“ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಚೆಫನ್ಯನಿಗೆ ಯೆಹೋವನು ಕೊಟ್ಟ ಸಂದೇಶ. ಆಮೋನನ ಮಗನಾದ ಯೋಷೀಯನು ಯೆಹೂದ ಪ್ರಾಂತ್ಯದ ಅರಸನಾಗಿದ್ದಾಗ ಈ ಸಂದೇಶವು ಅವನಿಗೆ ದೊರಕಿತು. ಚೆಫನ್ಯನು ಕೂಷನ ಮಗನು; ಕೂಷನು ಗೆದಲ್ಯನ ಮಗನು; ಗೆದಲ್ಯನು ಅಮರ್ಯನ ಮಗನು; ಅಮರ್ಯನು ಹಿಜ್ಕೀಯನ ಮಗನು.


ಇಷ್ಮಾಯೇಲನು ಗೆದಲ್ಯನನ್ನು ಕೊಂದು ಮಿಚ್ಫದಲ್ಲಿ ಸೆರೆಹಿಡಿದ ಬಂದಿಗಳನ್ನು ಕಾರೇಹನ ಮಗನಾದ ಯೋಹಾನಾನನು ಮತ್ತು ಅವನ ಸೇನಾಪತಿಗಳು ರಕ್ಷಿಸಿದರು. ಆಗ ಉಳಿದುಕೊಂಡವರಲ್ಲಿ ಸೈನಿಕರು, ಹೆಂಗಸರು, ಮಕ್ಕಳು ಮತ್ತು ಅಧಿಕಾರಿಗಳು ಸೇರಿದ್ದರು. ಯೋಹಾನಾನನು ಗಿಬ್ಯೋನಿನಿಂದ ಅವರನ್ನು ಹಿಂದಕ್ಕೆ ಕರೆತಂದನು.


ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.


ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.


ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯ.


ಆಗ ಯೆರೆಮೀಯನು ಬಾರೂಕನೆಂಬ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು