ಯೆರೆಮೀಯ 36:19 - ಪರಿಶುದ್ದ ಬೈಬಲ್19 ಆಗ ರಾಜಾಧಿಕಾರಿಗಳು ಬಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಬುದನ್ನು ಯಾರಿಗೂ ತಿಳಿಸಬೇಡಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ರಾಜ್ಯಾಧಿಕಾರಿಗಳು ಬಾರೂಕನಿಗೆ, ನೀನೂ ಯೆರೆಮೀಯನೂ ಹೊರಟುಹೋಗಿ ಅವಿತುಕೊಳ್ಳಬೇಕು. ನೀವು ಇಲ್ಲಿದ್ದೀರೆಂದು ಯಾರಿಗೂ ಗೊತ್ತಾಗಬಾರದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಪ್ರಧಾನರು ಬಾರೂಕನಿಗೆ - ಹೊರಡು, ನೀನೂ ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬದು ಯಾರಿಗೂ ಗೊತ್ತಾಗಬಾರದು ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು. ಅಧ್ಯಾಯವನ್ನು ನೋಡಿ |
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)