Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:2 - ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಗ್ರಂಥ ಬರೆಯತಕ್ಕ ಸುರಳಿಯನ್ನು ತೆಗೆದುಕೊಂಡು ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು, ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:2
34 ತಿಳಿವುಗಳ ಹೋಲಿಕೆ  

ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು.


ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.


ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.


ಆಗ ನಾನು ಒಂದು ಕೈ ನನ್ನ ಬಳಿಗೆ ಬರುವದನ್ನು ಕಂಡೆನು. ಆ ಕೈ ಒಂದು ಸುರುಳಿಯನ್ನು ಹಿಡುಕೊಂಡಿತ್ತು.


ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು.


ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು.


ಆದ್ದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಬಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನ್ನು ಓದು.


ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್‌.’” (ಇದರರ್ಥ: “ಕೊಳ್ಳೆಗೆ ಅವಸರ, ಸೂರೆಗೆ ಆತುರ.”)


ಆದ್ದರಿಂದ ನಾನು, “ಇಗೋ, ಬರುತ್ತಿದ್ದೇನೆ. ನನ್ನ ವಿಷಯವಾಗಿ ಗ್ರಂಥದಲ್ಲಿ ಇದನ್ನು ಬರೆಯಲಾಗಿದೆ.


ಮೇದ್ಯ ಪ್ರಾಂತ್ಯದ ಎಕ್‌ಬಟಾನ ಎಂಬ ಕೋಟೆಯೊಳಗೆ ಒಂದು ಸುರುಳಿಯು ದೊರಕಿತು. ಆ ಸುರುಳಿಯಲ್ಲಿ ಈ ರೀತಿಯಾಗಿ ಬರೆದಿತ್ತು: ಸರಕಾರದ ಆಜ್ಞೆ:


ಎಫ್ರಾಯೀಮನಿಗೆ ನಾನು ಸಾವಿರಾರು ವಿಧಿನಿಯಮಗಳನ್ನು ಬರೆದರೂ ಅವನು ಅವುಗಳನ್ನು ಬೇರೆಯವರಿಗಾಗಿ ಬರೆದದೆ ಎಂದು ತಿಳಿದುಕೊಳ್ಳುವನು.


ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ:


ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.


ಯಾಕೋಬನ ಮನೆತನದವರೇ, ಯೆಹೋವನ ಸಂದೇಶವನ್ನು ಕೇಳಿರಿ. ಇಸ್ರೇಲಿನ ಎಲ್ಲಾ ಕುಲದವರೇ, ಯೆಹೋವನ ಸಂದೇಶವನ್ನು ಕೇಳಿರಿ.


“ನಾನು ನಿನ್ನನ್ನು ನಿನ್ನ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನ್ನನ್ನು ಬಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನ್ನನ್ನು ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನ್ನಾಗಿ ಆರಿಸಿಕೊಂಡಿದ್ದೆನು.”


“ಅಯ್ಯೋ, ನನಗೆ ಕಿವಿಗೊಡುವುದಕ್ಕೆ ಯಾರಾದರೊಬ್ಬರು ಇರಬೇಕಿತ್ತು! ನಾನು ಸತ್ಯವನ್ನೇ ಹೇಳಿದೆನೆಂಬುದಕ್ಕೆ ಇದೋ, ಇಲ್ಲಿದೆ ನನ್ನ ಸಹಿ! ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ. ನನ್ನ ಮೇಲೆ ಅಪವಾದ ಹೊರಿಸುವವನು, ಆಪಾದನೆಯ ಪತ್ರವನ್ನು ಕೊಡಲಿ!


ಯೆಹೋವನ ಕಟ್ಟಳೆ, ವಿಧಿನಿಯಮಗಳ ಬೋಧನೆಯನ್ನೆಲ್ಲಾ ಮೋಶೆಯು ಪುಸ್ತಕದಲ್ಲಿ ಜಾಗ್ರತೆಯಾಗಿ ಬರೆದಿಟ್ಟನು.


ಆಗ ನಾನು, ‘ದೇವರೇ, ನಾನು ಇಲ್ಲಿದ್ದೇನೆ. ಧರ್ಮಶಾಸ್ತ್ರದಲ್ಲಿ ನನ್ನ ಬಗ್ಗೆ ಬರೆದಿರುವಂತೆಯೇ ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ’ ಎಂದು ಹೇಳಿದೆ.”


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ಆಗ ಆ ಅಧಿಕಾರಿಗಳೆಲ್ಲ ಯೆಹೂದಿ ಎಂಬುವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು. ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಧಿಕಾರಿಗಳ ಹತ್ತಿರಕ್ಕೆ ಹೋದನು.


“ಹೌದು, ಯೆರೆಮೀಯನು ಬಾಯಿಂದ ಹೇಳಿದನು ಮತ್ತು ನಾನು ಆ ಸಂದೇಶಗಳನ್ನೆಲ್ಲಾ ಶಾಹಿಯಿಂದ ಸುರುಳಿಯ ಮೇಲೆ ಬರೆದೆನು” ಎಂದು ಬಾರೂಕನು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು