20 ಅಧಿಕಾರಿಗಳು ಸುರುಳಿಯನ್ನು ಲೇಖಕ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟು, ಪ್ರಾಕಾರದಲ್ಲಿದ್ದ ಅರಸನ ಬಳಿಗೆ ಹೋಗಿ, ಈ ಮಾತುಗಳನ್ನೆಲ್ಲ ಅರಿಕೆ ಮಾಡಿದರು. ಅರಸನು ಕೂಡಲೆ ಸುರುಳಿಯನ್ನು ತರಬೇಕೆಂದು ಯೆಹೂದಿಯನ್ನು ಕಳಿಸಿದನು.
ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದರ್ಬಾರಿನ ಅಧಿಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು.
ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.