23 ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು.
23 ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
23 ಯೆಹೂದಿ ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರುಳಿ ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
23 ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
23 ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.
ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.
ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ
“ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.