Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:26 - ಪರಿಶುದ್ದ ಬೈಬಲ್‌

26 ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:26
34 ತಿಳಿವುಗಳ ಹೋಲಿಕೆ  

ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.


ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.


“ಈ ಸ್ಥಳವನ್ನು ತ್ಯಜಿಸಿ, ಪೂರ್ವದಿಕ್ಕಿಗೆ ಹೋಗು. ಕೆರೀತ್ ಹಳ್ಳದ ಹತ್ತಿರ ಅಡಗಿಕೊ. ಆ ಹಳ್ಳವು ಜೋರ್ಡನ್ ನದಿಯ ಪೂರ್ವದಲ್ಲಿದೆ.


ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಆ ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು.


ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.


ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು. ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.


ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.


ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ.


ಆಗ ರಾಜಾಧಿಕಾರಿಗಳು ಬಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಬುದನ್ನು ಯಾರಿಗೂ ತಿಳಿಸಬೇಡಿ” ಎಂದು ಹೇಳಿದರು.


ಆಗ ಯೆರೆಮೀಯನು ಬಾರೂಕನಿಗೆ ಹೀಗೆ ಹೇಳಿದನು: “ಯೆಹೋವನ ಆಲಯಕ್ಕೆ ನಾನು ಹೋಗಲಾರೆ. ಅಲ್ಲಿ ಹೋಗುವದಕ್ಕೆ ಅಪ್ಪಣೆಯಿಲ್ಲ.


ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.


ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)


ಆದರೆ ಮಹಾಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು.


ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.


ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ಆ ಜನರೆಲ್ಲಾ ನಿನ್ನ ವಿರುದ್ಧ ಹೋರಾಡುವರು, ಆದರೆ ಅವರು ನಿನ್ನನ್ನು ಸೋಲಿಸಲಾಗುವುದಿಲ್ಲ. ಏಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಾನೇ ನಿನ್ನನ್ನು ರಕ್ಷಿಸುವೆನು.” ಇದು ಯೆಹೋವನಾದ ನನ್ನ ಮಾತು.


“ಚೀದೋನ್ಯರ ಚಾರೆಪ್ತಗೆ ಹೋಗಿ ಅಲ್ಲಿ ವಾಸಮಾಡು. ಆ ಸ್ಥಳದಲ್ಲಿ ಒಬ್ಬ ವಿಧವೆಯು ವಾಸಿಸುತ್ತಾಳೆ. ನಿನಗೆ ಆಹಾರವನ್ನು ಕೊಡುವಂತೆ ಅವಳಿಗೆ ನಾನು ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.


ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.


ಆಗ ರಾಜನಾದ ಅಹಾಬನು ಮೀಕಾಯೆಹುವನ್ನು ಬಂಧಿಸುವಂತೆ ತನ್ನ ಅಧಿಕಾರಿಯೊಬ್ಬನಿಗೆ ಆಜ್ಞೆ ಮಾಡಿದನು. ರಾಜನಾದ ಅಹಾಬನು, “ಅವನನ್ನು ಬಂಧಿಸಿ, ನಗರಾಧಿಕಾರಿಯಾದ ಆಮೋನ ಮತ್ತು ರಾಜಪುತ್ರನಾದ ಯೋವಾಷನ ಬಳಿಗೆ ತೆಗೆದುಕೊಂಡು ಹೋಗಿ.


ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.


ಅವರಿಗೆ “ಮೀಕಾಯೆಹುವನ್ನು ಸೆರೆಮನೆಗೆ ಹಾಕಿ. ನಾನು ಯುದ್ಧದಿಂದ ಸುರಕ್ಷಿತವಾಗಿ ಹಿಂತಿರುಗುವ ತನಕ ಬರಿ ರೊಟ್ಟಿ ಮತ್ತು ನೀರನ್ನು ಮಾತ್ರ ಅವನಿಗೆ ಕೊಡಿ ಎಂದು ಅರಸನು ಆಜ್ಞಾಪಿಸುತ್ತಾನೆ ಎಂದು ಹೇಳಿ” ಎಂದನು.


“ನಾನು ಆರಿಸಿಕೊಂಡಿರುವ ಜನರಿಗೆ ಕೇಡುಮಾಡಬೇಡಿ. ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ” ಎಂದು ಆತನು ಹೇಳಿದನು.


ಶಾಫಾನನ ಮಗನಾದ ಅಹೀಕಾಮನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಹೀಕಾಮನು ಯೆರೆಮೀಯನಿಗೆ ಬೆಂಬಲ ಕೊಟ್ಟನು; ಯಾಜಕರು ಮತ್ತು ಪ್ರವಾದಿಗಳು ಅವನನ್ನು ಕೊಲ್ಲದಂತೆ ಕಾಪಾಡಿದರು.


ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು