Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:27 - ಪರಿಶುದ್ದ ಬೈಬಲ್‌

27 ಯೆರೆಮೀಯನು ಬಾರೂಕನಿಗೆ ಹೇಳಿದ್ದ, ಬಾರೂಕನು ಶಾಹಿಯಿಂದ ಬರೆದಿದ್ದ ಸುರುಳಿಯನ್ನು ಯೆಹೋಯಾಕೀಮನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಸುರುಳಿಯನ್ನು ಅರಸನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಸರ್ವೇಶ್ವರನಿಂದ ಈ ವಾಣಿ ಕೇಳಿಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅರಸನು ಆ ಸುರುಳಿಯನ್ನು ಬಾರೂಕನು ಯೆರೆಮೀಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ, ಸುಟ್ಟ ಮೇಲೆ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:27
3 ತಿಳಿವುಗಳ ಹೋಲಿಕೆ  

ಆಗ ಯೆರೆಮೀಯನು ಬಾರೂಕನೆಂಬ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು.


“ಹೌದು, ಯೆರೆಮೀಯನು ಬಾಯಿಂದ ಹೇಳಿದನು ಮತ್ತು ನಾನು ಆ ಸಂದೇಶಗಳನ್ನೆಲ್ಲಾ ಶಾಹಿಯಿಂದ ಸುರುಳಿಯ ಮೇಲೆ ಬರೆದೆನು” ಎಂದು ಬಾರೂಕನು ಉತ್ತರಿಸಿದನು.


ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು