Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:28 - ಪರಿಶುದ್ದ ಬೈಬಲ್‌

28 “ಯೆರೆಮೀಯನೇ, ಇನ್ನೊಂದು ಸುರುಳಿಯನ್ನು ತೆಗೆದುಕೊ. ಯೆಹೂದದ ರಾಜನಾದ ಯೆಹೋಯಾಕೀಮನು ಸುಟ್ಟುಹಾಕಿದ ಮೊದಲನೇ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಈ ಸುರುಳಿಯ ಮೇಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಜುದೇಯದ ಅರಸ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲ ಪುನಃ ಬರೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿಯಲ್ಲಿದ್ದ ಪೂರ್ವದ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ನೀನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:28
9 ತಿಳಿವುಗಳ ಹೋಲಿಕೆ  

ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.


“ದೇವರು ಎಂದಿಗೂ ಬದಲಾಗುವುದಿಲ್ಲ. ಯಾವನೂ ಆತನ ಮನಸ್ಸನ್ನು ಮಾರ್ಪಡಿಸಲಾರನು. ದೇವರು ತಾನು ಬಯಸಿದ್ದನ್ನೇ ಮಾಡುವನು.


ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು.


ಆಗ ಯೆರೆಮೀಯನು ಬಾರೂಕನೆಂಬ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು.


ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು