ಯೆರೆಮೀಯ 36:3 - ಪರಿಶುದ್ದ ಬೈಬಲ್3 ನಾನು ಮಾಡಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು. ಅಧ್ಯಾಯವನ್ನು ನೋಡಿ |
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”