Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:30 - ಪರಿಶುದ್ದ ಬೈಬಲ್‌

30 ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಈ ಕಾರಣ ಜುದೇಯದ ಅರಸ ಯೆಹೋಯಾಕೀಮನು ಆದ ನಿನ್ನ ವಿರುದ್ಧ ಸರ್ವೇಶ್ವರ ಹೀಗೆನ್ನುತ್ತಾರೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು. ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ಇರುಳಿನ ಚಳಿಗೂ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ರಾತ್ರಿಯ ಚಳಿಗೂ ಈಡಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:30
7 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”


ಹಗಲಿನಲ್ಲಿ ಸೂರ್ಯನಿಂದ ನನ್ನ ಶಕ್ತಿಯನ್ನು ಕುಂದಿಸಿದೆ; ರಾತ್ರಿಯಲ್ಲಿ ಚಳಿಯಿಂದ ನನಗೆ ನಿದ್ರೆಯು ಬರಲಿಲ್ಲ.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ರಾಜನಾದ ಯೆಹೋಯಾಕೀಮನು ಮಾಡಿದಂತೆ ಚಿದ್ಕೀಯನು ದುಷ್ಕೃತ್ಯಗಳನ್ನು ಮಾಡಿದನು. ಚಿದ್ಕೀಯನು ಆ ದುಷ್ಕೃತ್ಯಗಳನ್ನು ಮಾಡಿದ್ದು ಯೆಹೋವನಿಗೆ ಒಪ್ಪಿಗೆಯಾಗಲಿಲ್ಲ.


ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ಸುಖತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು