Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:4 - ಪರಿಶುದ್ದ ಬೈಬಲ್‌

4 ಆಗ ಯೆರೆಮೀಯನು ಬಾರೂಕನೆಂಬ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆಯಿಸಿ ಸರ್ವೇಶ್ವರನ ಮಾತುಗಳನ್ನೆಲ್ಲ ಹೇಳಿದನು. ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ನುಡಿಯಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರಳಿಯಲ್ಲಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆದನು. ಬಾರೂಕನು ಯೆರೆಮೀಯನ ಬಾಯಿಂದ ಯೆಹೋವ ದೇವರು ಅವನಿಗೆ ಹೇಳಿದ್ದ ಮಾತುಗಳನ್ನೆಲ್ಲಾ ಕೇಳಿ, ಗ್ರಂಥದ ಸುರುಳಿಯನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:4
22 ತಿಳಿವುಗಳ ಹೋಲಿಕೆ  

ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.


ಆಗ ನಾನು ಒಂದು ಕೈ ನನ್ನ ಬಳಿಗೆ ಬರುವದನ್ನು ಕಂಡೆನು. ಆ ಕೈ ಒಂದು ಸುರುಳಿಯನ್ನು ಹಿಡುಕೊಂಡಿತ್ತು.


ಅನಂತರ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಬಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನ್ನೇ ಯೆರೆಮೀಯನು ಹೇಳಿದಂತೆಲ್ಲ ಬಾರೂಕನು ಸುರುಳಿಯ ಮೇಲೆ ಬರೆದನು. ಬೇರೆ ಹಲವು ಸಂದೇಶಗಳನ್ನು ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.


ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಬಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಬುದು ನಮ್ಮ ಆಲೋಚನೆ. ಅವನು ನಮ್ಮನ್ನು ಬಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಬಯಸುತ್ತಾನೆ ಅಥವಾ ಅವರು ನಮ್ಮನ್ನು ಸೆರೆಹಿಡಿದು ಬಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಬಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು.


ಪೌಲನು ಹೇಳುತ್ತಿರುವ ಸಂಗತಿಗಳನ್ನು ಬರೆಯುತ್ತಿರುವ ತೆರ್ತ್ಯೆನೆಂಬ ನಾನು ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ.


ನಾನು ತಿರುಗಿ ಮೇಲಕ್ಕೆ ನೋಡಿದಾಗ ಒಂದು ಹಾರುವ ಸುರುಳಿಯನ್ನು ಕಂಡೆನು.


“ಯೆರೆಮೀಯನೇ, ಇನ್ನೊಂದು ಸುರುಳಿಯನ್ನು ತೆಗೆದುಕೊ. ಯೆಹೂದದ ರಾಜನಾದ ಯೆಹೋಯಾಕೀಮನು ಸುಟ್ಟುಹಾಕಿದ ಮೊದಲನೇ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಈ ಸುರುಳಿಯ ಮೇಲೆ ಬರೆ.


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು.


ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.


ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್‌.’” (ಇದರರ್ಥ: “ಕೊಳ್ಳೆಗೆ ಅವಸರ, ಸೂರೆಗೆ ಆತುರ.”)


ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.


ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು.


ಆದ್ದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಬಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನ್ನು ಓದು.


ಆಗ ಆ ಅಧಿಕಾರಿಗಳೆಲ್ಲ ಯೆಹೂದಿ ಎಂಬುವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು. ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಧಿಕಾರಿಗಳ ಹತ್ತಿರಕ್ಕೆ ಹೋದನು.


ಯೆರೆಮೀಯನು ಬಾರೂಕನಿಗೆ ಹೇಳಿದ್ದ, ಬಾರೂಕನು ಶಾಹಿಯಿಂದ ಬರೆದಿದ್ದ ಸುರುಳಿಯನ್ನು ಯೆಹೋಯಾಕೀಮನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು:


ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.


ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು.


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.


ಎಲ್ಲಾ ಜನರಿಗೆ ಕಾಣುವಂತೆ ಇದನ್ನು ಹಲಗೆಯ ಮೇಲೆ ಬರೆ; ಪುಸ್ತಕದಲ್ಲೂ ಬರೆ. ಕೊನೆಯ ದಿವಸಗಳಿಗಾಗಿ ಇದನ್ನು ಬರೆ. ಬಹುಕಾಲದ ನಂತರ ಇದು ಸಂಭವಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು