ಯೆರೆಮೀಯ 36:5 - ಪರಿಶುದ್ದ ಬೈಬಲ್5 ಆಗ ಯೆರೆಮೀಯನು ಬಾರೂಕನಿಗೆ ಹೀಗೆ ಹೇಳಿದನು: “ಯೆಹೋವನ ಆಲಯಕ್ಕೆ ನಾನು ಹೋಗಲಾರೆ. ಅಲ್ಲಿ ಹೋಗುವದಕ್ಕೆ ಅಪ್ಪಣೆಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಳಿಕ ಯೆರೆಮೀಯನು ಬಾರೂಕನಿಗೆ, “ಸರ್ವೇಶ್ವರನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಮಾಡಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮತ್ತು ಯೆರೆಮೀಯನು ಬಾರೂಕನಿಗೆ - ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಮೇಲೆ ಯೆರೆಮೀಯನು ಬಾರೂಕನಿಗೆ ಆಜ್ಞಾಪಿಸಿದ್ದೇನೆಂದರೆ, “ನಾನು ಇಲ್ಲಿ ಬಂಧಿಸಲಾಗಿದ್ದೇನೆ. ಯೆಹೋವ ದೇವರ ಆಲಯಕ್ಕೆ ಹೋಗಲಾರೆನು. ಅಧ್ಯಾಯವನ್ನು ನೋಡಿ |
ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.