ಯೆರೆಮೀಯ 36:7 - ಪರಿಶುದ್ದ ಬೈಬಲ್7 ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.” ಅಧ್ಯಾಯವನ್ನು ನೋಡಿ |
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.