ಯೆರೆಮೀಯ 36:9 - ಪರಿಶುದ್ದ ಬೈಬಲ್9 ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಬತ್ತನೆಯ ಒಂಬತ್ತನೆಯ ತಿಂಗಳಲ್ಲಿ ಜೆರುಸಲೇಮಿನವರೆಲ್ಲರು ಹಾಗು ಜುದೇಯದ ಊರುಗಳಿಂದ ಜೆರುಸಲೇಮಿಗೆ ಬಂದಿದ್ದವರೆಲ್ಲರು ಸರ್ವೇಶ್ವರನ ಸಮ್ಮುಖದಲ್ಲಿ ಉಪವಾಸವ್ರತವನ್ನು ಗೊತ್ತುಮಾಡಿ ಪ್ರಕಟಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಐದನೆಯ ವರುಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇವಿುನವರೆಲ್ಲರೂ ಯೆಹೂದದ ಊರುಗಳಿಂದ ಯೆರೂಸಲೇವಿುಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು. ಅಧ್ಯಾಯವನ್ನು ನೋಡಿ |
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.