ಯೆರೆಮೀಯ 37:1 - ಪರಿಶುದ್ದ ಬೈಬಲ್1 ನೆಬೂಕದ್ನೆಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೋಷೀಯನ ಮಗ ಚಿದ್ಕೀಯನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅವನನ್ನು ಜುದೇಯದ ನಾಡಿಗೆ ಅರಸನನ್ನಾಗಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು. ಅಧ್ಯಾಯವನ್ನು ನೋಡಿ |
ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)