Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:14 - ಪರಿಶುದ್ದ ಬೈಬಲ್‌

14 “ಅದು ನಿಜವಲ್ಲ, ಬಾಬಿಲೋನಿನವರ ಕಡೆ ಸೇರಿಕೊಳ್ಳಲು ನಾನು ಬಿಟ್ಟುಹೋಗುತ್ತಿಲ್ಲ” ಎಂದು ಯೆರೆಮೀಯನು ಇರೀಯನಿಗೆ ಹೇಳಿದನು. ಆದರೆ ಇರೀಯನು ಯೆರೆಮೀಯನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಇರೀಯನು ಯೆರೆಮೀಯನನ್ನು ಬಂಧಿಸಿ ಜೆರುಸಲೇಮಿನ ರಾಜಾಧಿಕಾರಿಗಳ ಬಳಿಗೆ ಕರೆದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಕಸ್ದೀಯರಲ್ಲಿ ಮೊರೆಹೋಗುವವನಲ್ಲ” ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಬಾಬಿಲೋನಿಯರನ್ನು ಮರೆಹೋಗುವವನಲ್ಲ,” ಎಂದನು. ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಬಂಧಿಸಿ, ಪದಾಧಿಕಾರಿಗಳ ಬಳಿಗೆ ಕರೆದುತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಯೆರೆಮೀಯನು - ಅದು ಸುಳ್ಳು, ನಾನು ಕಸ್ದೀಯರನ್ನು ಮರೆಹೊಗುವವನಲ್ಲ ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಯೆರೆಮೀಯನು ಹೇಳಿದ್ದೇನೆಂದರೆ, ಸುಳ್ಳು; ನಾನು ಕಸ್ದೀಯರ ಕಡೆಗೆ ಸೇರುವವನಲ್ಲ. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆಮೀಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:14
10 ತಿಳಿವುಗಳ ಹೋಲಿಕೆ  

ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


“ಜನರಿಂದ ಯಾವಾಗಲೂ ಹೊಗಳಿಸಿಕೊಳ್ಳುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳು ಪ್ರವಾದಿಗಳನ್ನು ಯಾವಾಗಲೂ ಹೊಗಳುತ್ತಿದ್ದರು.


ಸುಳ್ಳುಸಾಕ್ಷಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು.


ನಾನು ಆ ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು