Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:21 - ಪರಿಶುದ್ದ ಬೈಬಲ್‌

21 ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ದಿನವಹಿ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:21
35 ತಿಳಿವುಗಳ ಹೋಲಿಕೆ  

ಜೆರುಸಲೇಮ್ ನಗರವು ಶತ್ರುಗಳ ವಶವಾಗುವವರೆಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಮಾಡಿಕೊಂಡಿದ್ದನು.


ಅವರು ಯೆರೆಮೀಯನನ್ನು ಹಗ್ಗದಿಂದ ಮೇಲಕ್ಕೆ ಎಳೆದು ಬಾವಿಯಿಂದ ಹೊರತೆಗೆದರು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಿಸಿದನು.


ಆ ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ಆ ನಗರದಲ್ಲಿ ಹಸಿವಿನ ಹಾವಳಿ ತುಂಬ ಹೆಚ್ಚಾಗಿತ್ತು. ಆ ನಗರದಲ್ಲಿ ಜನರಿಗೆ ತಿನ್ನಲು ಆಹಾರವೇ ಇರಲಿಲ್ಲ.


ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.


ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು.


ನಾಲ್ಕನೆಯ ತಿಂಗಳ ಒಂಭತ್ತನೆಯ ದಿನದಂದು ನಗರದಲ್ಲಿ ಭೀಕರ ಬರಗಾಲವಿತ್ತು. ಅಲ್ಲಿನ ಸಾಮಾನ್ಯರಿಗೆ ಆಹಾರವೇನೂ ಇರಲಿಲ್ಲ.


ಬರಗಾಲದಲ್ಲಿ ಮರಣದಿಂದಲೂ ಯುದ್ಧದಲ್ಲಿ ಕತ್ತಿಯಿಂದಲೂ ಆತನು ನಿನ್ನನ್ನು ಸಂರಕ್ಷಿಸುವನು.


ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.


ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.


ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಪೌಲನು ತನ್ನ ಬಾಡಿಗೆ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ಸಂದರ್ಶಿಸಲು ಬಂದ ಜನರೆಲ್ಲರನ್ನು ಆದರದಿಂದ ಬರಮಾಡಿಕೊಂಡು,


ಬಳಿಕ ನಾವು ರೋಮಿಗೆ ಹೋದೆವು. ಅಲ್ಲಿ ಪ್ರತ್ಯೇಕವಾಗಿರಲು ಪೌಲನಿಗೆ ಅವಕಾಶವನ್ನು ಕೊಡಲಾಯಿತು. ಆದರೆ ಪೌಲನನ್ನು ಕಾಯುವುದಕ್ಕಾಗಿ ಸೈನಿಕನೊಬ್ಬನು ಅವನೊಂದಿಗಿದ್ದನು.


ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


ಹೀಗೆ ಪೇತ್ರನು ಸೆರೆಮನೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ಎಡಬಿಡದೆ ದೇವರಲ್ಲಿ ಪ್ರಾರ್ಥಿಸುತ್ತಿದ್ದರು.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ.


“ಆಮೇಲೆ ಯೆಹೋವನು ಹೇಳಿದಂತೆಯೇ ಆಯಿತು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿದ್ದ ನನ್ನ ಬಳಿಗೆ ಬಂದು ಹೀಗೆ ಹೇಳಿದನು: ‘ಯೆರೆಮೀಯನೇ, ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಆ ಹೊಲವನ್ನು ನಿನಗಾಗಿ ಕೊಂಡುಕೊ. ಅದರ ಒಡೆಯನಾಗುವದಕ್ಕೆ ನಿನಗೆ ಹಕ್ಕಿದೆ.’” ಇದು ಯೆಹೋವನ ಸಂದೇಶವೆಂದು ನನಗೆ ತಿಳಿಯಿತು.


ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಆಪತ್ಕಾಲದಲ್ಲಿ ನೀತಿವಂತರು ನಾಶವಾಗುವುದಿಲ್ಲ. ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಎರಡನೇ ಬಾರಿ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು. ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.


ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ದ್ವಾರದಲ್ಲಿದ್ದ ಕೋಳಕ್ಕೆ ಹಾಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು