ಯೆರೆಮೀಯ 37:3 - ಪರಿಶುದ್ದ ಬೈಬಲ್3 ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರೆಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ, ಇವರ ಮೂಲಕ - ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿ |
ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.
“ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.