Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:6 - ಪರಿಶುದ್ದ ಬೈಬಲ್‌

6 ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ಸಂದರ್ಭದಲ್ಲಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿ ಬಂದ ವಾಣಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಯೆರೆಮೀಯನಿಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:6
4 ತಿಳಿವುಗಳ ಹೋಲಿಕೆ  

ಅದಲ್ಲದೆ ಆಗ ಫರೋಹನ ಸೈನ್ಯವು ಈಜಿಪ್ಟಿನಿಂದ ಯೆಹೂದದ ಕಡೆಗೆ ಹೊರಟಿತ್ತು. ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಬಾಬಿಲೋನ್ ಸೈನ್ಯವು ಜೆರುಸಲೇಮ್ ನಗರಕ್ಕೆ ಮುತ್ತಿಗೆ ಹಾಕಿತ್ತು. ಆಗ ಈಜಿಪ್ಟಿನ ಸೈನ್ಯವು ತಮ್ಮ ಕಡೆ ಬರುತ್ತಿದೆ ಎಂಬ ಸಮಾಚಾರವು ಬಂದಿತು. ಅದನ್ನು ಕೇಳಿ ಬಾಬಿಲೋನಿನ ಸೈನ್ಯವು ಈಜಿಪ್ಟಿನ ಸೈನ್ಯವನ್ನೆದುರಿಸಲು ಜೆರುಸಲೇಮನ್ನು ಬಿಟ್ಟುಹೋಗಿತ್ತು.)


“ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.


ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.


“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು