Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:7 - ಪರಿಶುದ್ದ ಬೈಬಲ್‌

7 “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:7
22 ತಿಳಿವುಗಳ ಹೋಲಿಕೆ  

ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರಲಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, ಆದರೆ ಯಾವ ಜನಾಂಗವೂ ಬರಲಿಲ್ಲ.


ಈಜಿಪ್ಟಿನ ರಾಜನು ಯೆಹೂದದ ರಾಜನನ್ನು ರಕ್ಷಿಸಲು ಸಾಧ್ಯವಿಲ್ಲ. ಅವನು ಬಹಳ ಸೈನಿಕರನ್ನು ಕಳುಹಿಸಬಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನ್ನು ರಕ್ಷಿಸಲಾರದು. ನೆಬೂಕದ್ನೆಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನ್ನೂ ತಡೆಗಟ್ಟುಗಳನ್ನೂ ಕಟ್ಟಿ ಪಟ್ಟಣವನ್ನು ವಶಪಡಿಸಿಕೊಳ್ಳುವುದು. ಎಷ್ಟೋ ಮಂದಿ ಸಾಯುವರು.


ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರೆಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”


ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”


“ಯೆಹೂದದ ರಾಜನಾದ ಯೋಷೀಯನು ಯೆಹೋವನ ಸಲಹೆಯನ್ನು ಕೇಳಲು ನಿಮ್ಮನ್ನು ಕಳುಹಿಸಿದನು. ಯೋಷೀಯನಿಗೆ ಈ ಸಂಗತಿಗಳನ್ನು ಹೇಳಿ: ‘ನೀನು ಕೇಳುವ ಈ ಮಾತುಗಳನ್ನು ಇಸ್ರೇಲರ ದೇವರಾದ ಯೆಹೋವನು ಹೇಳಿದನು. ಈ ದೇಶವನ್ನು ಮತ್ತು ಇಲ್ಲಿ ವಾಸಿಸುವ ಜನರನ್ನು ಕುರಿತು ನಾನು ಹೇಳಿದ ಸಂಗತಿಗಳನ್ನು ನೀನು ಕೇಳಿರುವೆ. ನಿನ್ನ ಹೃದಯವು ಮೃದುವಾಗಿರುವುದರಿಂದ, ನೀನು ಅವುಗಳನ್ನು ಕೇಳಿದಾಗ ದೈನ್ಯತೆಯುಳ್ಳವನಾದೆ. ಈ ಸ್ಥಳಕ್ಕೆ (ಜೆರುಸಲೇಮಿಗೆ) ಆ ಭೀಕರ ಸಂಗತಿಗಳಾಗುತ್ತವೆಯೆಂದು ನಾನು ಹೇಳಿದೆ. ಆಗ ನೀನು ದುಃಖದಿಂದ ನಿನ್ನ ಬಟ್ಟೆಗಳನ್ನು ಹರಿದುಕೊಂಡು ಅಳಲಾರಂಭಿಸಿದೆ. ಆದಕಾರಣವೇ ನಾನು ನಿನಗೆ ಕಿವಿಗೊಟ್ಟೆನು.’ ಯೆಹೋವನು ಹೇಳುವುದೇನೆಂದರೆ:


ಇಸ್ರೇಲರು ಅವರ ಮೇಲೆ ಇನ್ನು ಎಂದಿಗೂ ಭರವಸವಿಡುವುದಿಲ್ಲ. ಇಸ್ರೇಲರು ಸಹಾಯಕ್ಕಾಗಿ ದೇವರ ಬಳಿಗೆ ಹೋಗದೆ ಈಜಿಪ್ಟಿನವರ ಮೇಲೆ ಭರವಸವಿಟ್ಟಿದ್ದ ಪಾಪವನ್ನು ಅರಿತುಕೊಳ್ಳುವರು. ಆಗ ಅವರು ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.”


ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?


ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”


ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು.


ಅದಲ್ಲದೆ ಆಗ ಫರೋಹನ ಸೈನ್ಯವು ಈಜಿಪ್ಟಿನಿಂದ ಯೆಹೂದದ ಕಡೆಗೆ ಹೊರಟಿತ್ತು. ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಬಾಬಿಲೋನ್ ಸೈನ್ಯವು ಜೆರುಸಲೇಮ್ ನಗರಕ್ಕೆ ಮುತ್ತಿಗೆ ಹಾಕಿತ್ತು. ಆಗ ಈಜಿಪ್ಟಿನ ಸೈನ್ಯವು ತಮ್ಮ ಕಡೆ ಬರುತ್ತಿದೆ ಎಂಬ ಸಮಾಚಾರವು ಬಂದಿತು. ಅದನ್ನು ಕೇಳಿ ಬಾಬಿಲೋನಿನ ಸೈನ್ಯವು ಈಜಿಪ್ಟಿನ ಸೈನ್ಯವನ್ನೆದುರಿಸಲು ಜೆರುಸಲೇಮನ್ನು ಬಿಟ್ಟುಹೋಗಿತ್ತು.)


ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು:


ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನ್ನೂ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನ್ನೊಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು.


ಈಜಿಪ್ಟಿನ ರಾಜನು ಈಜಿಪ್ಟನ್ನು ಬಿಟ್ಟು ಹೊರಗೆ ಹೋಗಲಿಲ್ಲ. ಏಕೆಂದರೆ ಬಾಬಿಲೋನ್ ರಾಜನು, ಈಜಿಪ್ಟಿನ ಹಳ್ಳದಿಂದ ಯೂಫ್ರೇಟೀಸ್ ನದಿಯವರೆಗಿನ ದೇಶವನ್ನೆಲ್ಲಾ ಆಕ್ರಮಿಸಿಕೊಂಡಿದ್ದನು.


ಈಜಿಪ್ಟ್ ಯಾವ ಪ್ರಯೋಜನಕ್ಕೂ ಬಾರದು. ಅದರ ಸಹಾಯವು ಏನೂ ಅಲ್ಲ. ಅದಕ್ಕಾಗಿ ನಾನು ಈಜಿಪ್ಟನ್ನು “ಏನೂ ಮಾಡದ ದೈತ್ಯಾಕಾರದ ಮೃಗ” ಎಂದು ಕರೆಯುತ್ತೇನೆ.


ಈಜಿಪ್ಟು ನಿನಗೆ ಸಹಾಯ ಮಾಡುವುದೆಂದು ನಂಬಿರುವಿಯಾ? ಈಜಿಪ್ಟು ಒಂದು ಮುರಿದ ದಂಟು. ಅದರ ಮೇಲೆ ನೀನು ಭಾರಹಾಕಿದರೆ ಅದು ನಿನ್ನ ಅಂಗೈಯಲ್ಲಿ ರಂಧ್ರಮಾಡುವುದು. ಈಜಿಪ್ಟಿನ ರಾಜನಾದ ಫರೋಹನ ಸಹಾಯಕ್ಕಾಗಿ ಆಶ್ರಯಿಸಿಕೊಂಡ ಯಾವ ಜನರೂ ಅವನಲ್ಲಿ ಭರವಸೆ ಇಡಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು