ಯೆರೆಮೀಯ 37:8 - ಪರಿಶುದ್ದ ಬೈಬಲ್8 ಬಳಿಕ ಬಾಬಿಲೋನಿನ ಸೈನ್ಯವು ಇಲ್ಲಿಗೆ ಬರುವುದು. ಅವರು ಜೆರುಸಲೇಮಿನ ಮೇಲೆ ಧಾಳಿ ಮಾಡುವರು. ಆಗ ಬಾಬಿಲೋನಿನ ಆ ಸೈನ್ಯವು ಜೆರುಸಲೇಮನ್ನು ವಶಪಡಿಸಿಕೊಂಡು ಅದನ್ನು ಸುಟ್ಟುಹಾಕುವುದು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಾಬಿಲೋನಿಯದವರು ಪುನಃ ಬಂದು ಈ ನಗರದ ಮೇಲೆ ದಾಳಿ ನಡೆಸುವರು. ಇದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಹಾಕುವರು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕಸ್ದೀಯರು ಪುನಃ ಮತ್ತೆ ಬಂದು ಈ ಪಟ್ಟಣವನ್ನು ಪ್ರತಿಭಟಿಸಿ ಆಕ್ರವಿುಸಿ ಬೆಂಕಿಯಿಂದ ಸುಟ್ಟುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕಸ್ದೀಯರು ತಿರುಗಿಕೊಂಡು, ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು.’ ಅಧ್ಯಾಯವನ್ನು ನೋಡಿ |
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.
ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.