ಯೆರೆಮೀಯ 37:9 - ಪರಿಶುದ್ದ ಬೈಬಲ್9 ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮ್ ನಿವಾಸಿಗಳೇ “ಬಾಬಿಲೋನ್ ಸೈನಿಕರು ಖಂಡಿತವಾಗಿಯೂ ನಮ್ಮನ್ನು ಬಿಟ್ಟುಹೋಗುವರು” ಎಂದು ನಿಮಗೆ ನೀವೇ ಹೇಳಿಕೊಂಡು ನಿಮ್ಮನ್ನು ಮೂರ್ಖರನ್ನಾಗಿ ಮಾಡಿಕೊಳ್ಳಬೇಡಿ, ಅವರು ನಿಮ್ಮನ್ನು ಬಿಟ್ಟುಹೋಗುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಇಂತೆನ್ನುತ್ತಾನೆ, “ಕಸ್ದೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ಇಂತೆನ್ನುತ್ತಾರೆ:- ಬಾಬಿಲೋನಿಯರು ನಿಮ್ಮಿಂದ ಖಂಡಿತವಾಗಿ ತೊಲಗಿಹೋಗುವರು ಎಂದುಕೊಂಡು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ಅವರು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ಇಂತೆನ್ನುತ್ತಾನೆ - ಕಸ್ದೀಯರು ನಮ್ಮಿಂದ ತೊಲಗಿ ಹೋಗುವದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಕಸ್ದೀಯರು ನಿಜವಾಗಿ ನಮ್ಮನ್ನು ಬಿಟ್ಟು ಹೋಗುವರು,’ ಎಂದುಕೊಂಡು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ; ಏಕೆಂದರೆ ಅವರು ತೊಲಗುವುದೇ ಇಲ್ಲ. ಅಧ್ಯಾಯವನ್ನು ನೋಡಿ |