Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:1 - ಪರಿಶುದ್ದ ಬೈಬಲ್‌

1 ಯೆರೆಮೀಯನು ಪ್ರವಾದಿಸುತ್ತಿರುವುದನ್ನು ಕೆಲವು ಜನ ರಾಜಾಧಿಕಾರಿಗಳು ಕೇಳಿಸಿಕೊಂಡರು. ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರುಗಳು ಅವನ ಮಾತನ್ನೆಲ್ಲಾ ಕೇಳಿಸಿಕೊಂಡರು. ಯೆರೆಮೀಯನು ಎಲ್ಲಾ ಜನರಿಗೆ ಈ ಸಂದೇಶವನ್ನು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆರೆಮೀಯನು ಜನರೆಲ್ಲರಿಗೆ, “ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: ನಗರದಲ್ಲಿ ನಿಲ್ಲುವವನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವನು. ನಗರವನ್ನು ಬಿಟ್ಟುಹೋಗಿ ಬಾಬಿಲೋನಿಯರನ್ನು ಮರೆಹೋಗುವವನು ಬದುಕುವನು. ತನ್ನ ಪ್ರಾಣವೊಂದನ್ನಾದರೂ ಬಾಚಿಕೊಂಡು ಹೋಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರೆಮೀಯನು ಸಮಸ್ತ ಜನರಿಗೆ - ಯೆಹೋವನು ಇಂತೆನ್ನುತ್ತಾನೆ - ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮರೆಹೊಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗಿ ಬದುಕುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮತ್ತಾನನ ಮಗ ಶೆಫಟ್ಯ, ಪಷ್ಹೂರನ ಮಗ ಗೆದಲ್ಯ, ಶೆಲೆಮ್ಯನ ಮಗ ಯೂಕಲ ಹಾಗೂ ಮಲ್ಕೀಯನ ಮಗ ಪಷ್ಹೂರ, ಇವರು ಯೆರೆಮೀಯನು ಜನರೆಲ್ಲರಿಗೆ ಹೇಳುತ್ತಿದ್ದುದನ್ನು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:1
12 ತಿಳಿವುಗಳ ಹೋಲಿಕೆ  

“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.


ದೇವಾಲಯದೊಳಗೆ ಸೇವೆಮಾಡುವ ಎಂಟುನೂರ ಇಪ್ಪತ್ತೆರಡು ಮಂದಿ ಮತ್ತು ಯೆರೋಹಾಮನ ಮಗನಾದ ಅದಾಯ. ಯೆರೋಹಾಮನು ಪೆಲಲ್ಯನ ಮಗ; ಪೆಲಲ್ಯನು ಅಮ್ಚೀಯ ಮಗ; ಅಮ್ಚೀಯು ಜೆಕರ್ಯನ ಮಗ; ಜೆಕರ್ಯನು ಪಷ್ಹೂರನ ಮಗ; ಪಷ್ಹೂರನು ಮಲ್ಕೀಯನ ಮಗ.


ಶೆಫಟ್ಯನ ಸಂತಾನದವರು 372


ಪರೋಷಿನ ಸಂತತಿಯವರು 2,172


ಇವರಲ್ಲದೆ, ಯೆರೋಹಾಮನ ಮಗನಾದ ಅದಾಯನು ಸಹ ಇದ್ದನು. ಯೆರೋಹಾಮನು ಪಶ್ಹೂರನ ಮಗ; ಪಶ್ಹೂರನು ಮಲ್ಕೀಯನ ಮಗ; ಇವರಲ್ಲದೆ, ಅದೀಯೇಲನ ಮಗನಾದ ಮಾಸೈ ಸಹ ಇದ್ದನು. ಅದೀಯೇಲನು ಯಹ್ಜೇರನ ಮಗ. ಯಹ್ಜೇರನು ಮೆಷುಲ್ಲಾಮನ ಮಗ. ಮೆಷುಲ್ಲಾಮನು ಮೆಷಿಲ್ಲೇಮೋತನ ಮಗ. ಮೆಷಿಲ್ಲೇಮೋತನು ಇಮ್ಮೇರನ ಮಗ.


ಶಿಮ್ಮನು ಮೀಕಾಯೇಲನ ಮಗ. ಮೀಕಾಯೇಲನು ಬಾಸೇಯನ ಮಗ. ಬಾಸೇಯನು ಮಲ್ಕೀಯನ ಮಗ.


ಯೆರೆಮೀಯನು ಈ ಸಂದೇಶವನ್ನು ಯೆಹೂದದ ಜನರೆಲ್ಲರಿಗೂ ಜೆರುಸಲೇಮಿನ ಜನರೆಲ್ಲರಿಗೂ ಸಾರಿದನು.


ಆದರೆ ಅಂದು ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಊಹಿಸಿ ಭಯಪಟ್ಟಂತೆ ನಿನ್ನನ್ನು ಆ ಜನರ ಕೈಗೆ ಒಪ್ಪಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು