Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:14 - ಪರಿಶುದ್ದ ಬೈಬಲ್‌

14 ರಾಜನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಒಬ್ಬನ ಮೂಲಕ ಯೆಹೋವನ ಆಲಯದ ಮೂರನೇ ಪ್ರವೇಶದ್ವಾರಕ್ಕೆ ಕರೆಸಿದನು. ರಾಜನು ಅವನಿಗೆ, “ಯೆರೆಮೀಯನೇ, ನಾನು ನಿನಗೆ ಒಂದು ವಿಷಯವನ್ನು ಕೇಳಲಿದ್ದೇನೆ. ನನ್ನಿಂದ ಏನನ್ನೂ ಮುಚ್ಚಿಡಬೇಡ. ಎಲ್ಲವನ್ನು ಪ್ರಾಮಾಣಿಕವಾಗಿ ನನಗೆ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರತರಿಸಿ - ನಾನು ನಿನ್ನನ್ನು ಒಂದು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ತನ್ನ ಬಳಿಗೆ ಕರೆಯಿಸಿ, ಯೆಹೋವ ದೇವರ ಆಲಯದಲ್ಲಿರುವ ಮೂರನೆಯ ದ್ವಾರಕ್ಕೆ ಕರೆದುಕೊಂಡು ಹೋದನು. ಆಗ ಅರಸನು ಯೆರೆಮೀಯನಿಗೆ, “ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವುದನ್ನಾದರೂ ಬಚ್ಚಿಡಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:14
11 ತಿಳಿವುಗಳ ಹೋಲಿಕೆ  

ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.


ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.


ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಬೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.


ಆಗ ಅಹಾಬನು ಮೀಕಾಯೆಹುವಿಗೆ, “ನೀನು ಯೆಹೋವನ ಹೆಸರಿನಲ್ಲಿ ನನಗೆ ಸತ್ಯವನ್ನೇ ತಿಳಿಸಬೇಕೆಂದು ಎಷ್ಟೋ ಸಲ ನಿನ್ನಿಂದ ಪ್ರಮಾಣ ಮಾಡಿಸಿರುತ್ತೇನೆ” ಎಂದು ಹೇಳಿದಾಗ ಮೀಕಾಯೆಹುವು,


ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು.


ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.


ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ.


ರಾಜನಾದ ದಾವೀದನು ಆ ಸ್ತ್ರೀಗೆ, “ನಾನು ಕೇಳುವ ಪ್ರಶ್ನೆಗೆ ನೀನು ಉತ್ತರವನ್ನು ಹೇಳಲೇಬೇಕು” ಎಂದು ಉತ್ತರಿಸಿದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಿನ್ನ ಪ್ರಶ್ನೆಯನ್ನು ಕೇಳು” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು