ಯೆರೆಮೀಯ 38:17 - ಪರಿಶುದ್ದ ಬೈಬಲ್17 ಆಗ ಯೆರೆಮೀಯನು ರಾಜನಾದ ಚಿದ್ಕೀಯನಿಗೆ ಹೀಗೆಂದನು: “ಇಸ್ರೇಲರ ದೇವರಾದ ಮತ್ತು ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಬಾಬಿಲೋನಿನ ರಾಜನ ಅಧಿಕಾರಿಗಳಿಗೆ ಶರಣಾಗತನಾದರೆ ನಿನ್ನ ಪ್ರಾಣವನ್ನು ಉಳಿಸಲಾಗುವುದು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲ್ಪಡುವುದಿಲ್ಲ. ನೀನೂ ಬದುಕುವೆ ಮತ್ತು ನಿನ್ನ ಕುಟುಂಬದವರೂ ಬದುಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆರೆಮೀಯನು ಚಿದ್ಕೀಯನಿಗೆ - ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಕ್ಕರೆ ನಿನ್ನ ಪ್ರಾಣವುಳಿಯುವದು, ಈ ಪಟ್ಟಣವೂ ಬೆಂಕಿಯಿಂದ ಸುಡದು, ನೀನೂ ನಿನ್ನ ಮನೆತನದವರೂ ಬದುಕುವಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಯೆರೆಮೀಯನು ಚಿದ್ಕೀಯನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿಶ್ಚಯವಾಗಿ ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ, ನಿನ್ನ ಪ್ರಾಣವು ಬದುಕುವುದು. ಈ ಪಟ್ಟಣವು ಬೆಂಕಿಯಿಂದ ಸುಡಲಾಗುವುದಿಲ್ಲ. ನೀನೂ, ನಿನ್ನ ಮನೆಯವರೂ ಬದುಕುವಿರಿ. ಅಧ್ಯಾಯವನ್ನು ನೋಡಿ |
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.