ಯೆರೆಮೀಯ 38:18 - ಪರಿಶುದ್ದ ಬೈಬಲ್18 ಆದರೆ ನೀನು ಬಾಬಿಲೋನಿನ ಅಧಿಕಾರಿಗಳಿಗೆ ಶರಣಾಗತನಾಗಲು ಒಪ್ಪದ್ದಿದ್ದರೆ, ಜೆರುಸಲೇಮನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನ್ನು ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವದು. ಅವರು ಅದನ್ನು ಬೆಂಕಿಯಿಂದ ಸುಟ್ಟುಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು. ಅಧ್ಯಾಯವನ್ನು ನೋಡಿ |
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.