ಯೆರೆಮೀಯ 38:2 - ಪರಿಶುದ್ದ ಬೈಬಲ್2 “ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬದುಕುವರು. ಅವರು ಜೀವಂತ ಉಳಿಯುವರು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರವಿುಸುವನು; ಅದು ಅವನ ಸೈನ್ಯದ ವಶವಾಗುವದು ಖಂಡಿತ ಎಂದು ಸಾರುತ್ತಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು. ಅಧ್ಯಾಯವನ್ನು ನೋಡಿ |
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.