Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:20 - ಪರಿಶುದ್ದ ಬೈಬಲ್‌

20 ಆದರೆ ಯೆರೆಮೀಯನು, “ರಾಜನಾದ ಚಿದ್ಕೀಯನೇ, ಆ ಸೈನಿಕರು ನಿನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನ್ನ ಪ್ರಾಣ ಉಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆರೆಮೀಯನು - ನಿನ್ನನ್ನು ಒಪ್ಪಿಸರು; ಜೀಯಾ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಕೊಳ್ಳು; ಕೈಕೊಂಡರೆ ಪ್ರಾಣವುಳಿಯುವದು, ಸುಖವೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೆರೆಮೀಯನು, “ಅವರು ನಿನ್ನನ್ನು ಒಪ್ಪಿಸುವುದಿಲ್ಲ” ನಾನು ನಿನಗೆ ಹೇಳುವ ಯೆಹೋವ ದೇವರ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೆಯದಾಗುವುದು. ನಿನ್ನ ಪ್ರಾಣ ಬದುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:20
20 ತಿಳಿವುಗಳ ಹೋಲಿಕೆ  

ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ನೀವು ನಿಮ್ಮ ನಡತೆಯನ್ನು ಬದಲಾಯಿಸಿಕೊಂಡು, ಸತ್ಕಾರ್ಯಗಳನ್ನು ಮಾಡಲಾರಂಭಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಬೇಕು. ಆಗ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ನಿಮಗೆ ಕೇಡುಮಾಡುವುದಿಲ್ಲ.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.


ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.


ದೇವರ ವಾಕ್ಯವನ್ನು ಕೇವಲ ಕೇಳುವವರಾಗಿರದೆ ಅದನ್ನು ಕಾರ್ಯರೂಪಕ್ಕೆ ತನ್ನಿರಿ. ಇಲ್ಲವಾದರೆ ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳುವಿರಿ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.


ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.


ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.


ಅಗೋ, ಅಲ್ಲಿ ಒಂದು ಚಿಕ್ಕ ಊರಿದೆ. ಆ ಊರಿಗೆ ಓಡಿಹೋಗಲು ನನಗೆ ಅಪ್ಪಣೆಕೊಡಿ. ನಾನು ಅಲ್ಲಿಗೆ ಓಡಿಹೋಗಿ ಸುರಕ್ಷಿತವಾಗಿರುವೆನು” ಎಂದು ಹೇಳಿದನು.


ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಬಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಬಡಿಕೆಯನ್ನು ಪಾಲಿಸಬೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”


ನೀನು ಬಾಬಿಲೋನಿನ ಸೈನಿಕರಿಗೆ ಶರಣಾಗತನಾಗದಿದ್ದರೆ ಏನಾಗುವದೆಂಬುದನ್ನು ಯೆಹೋವನು ನನಗೆ ತೋರಿಸಿಕೊಟ್ಟಿದ್ದಾನೆ. ಯೆಹೋವನು ನನಗೆ ಹೀಗೆ ಹೇಳಿದ್ದಾನೆ:


ನನ್ನ ತಂದೆ ನನಗೆ ಉಪದೇಶ ಮಾಡಿದ್ದೇನೆಂದರೆ: “ನನ್ನ ಮಾತುಗಳನ್ನು ನೆನಪುಮಾಡಿಕೊ; ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಬದುಕುವೆ.


ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಜೀವಿಸುವೆ. ನಿನ್ನ ಕಣ್ಣುಗುಡ್ಡೆಗಳೋ ಎಂಬಂತೆ ನನ್ನ ಉಪದೇಶಗಳಿಗೆ ಎಚ್ಚರಿಕೆಯಿಂದ ವಿಧೇಯನಾಗಿರು.


ಇಸ್ರೇಲ್ ಜನಾಂಗಕ್ಕೆ ಯೆಹೋವನು ಹೀಗೆನ್ನುತ್ತಾನೆ: “ನನ್ನನ್ನು ಹುಡುಕುತ್ತಾ ಬಂದು ಬದುಕುವವನಾಗು.


ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು