ಯೆರೆಮೀಯ 38:21 - ಪರಿಶುದ್ದ ಬೈಬಲ್21 ನೀನು ಬಾಬಿಲೋನಿನ ಸೈನಿಕರಿಗೆ ಶರಣಾಗತನಾಗದಿದ್ದರೆ ಏನಾಗುವದೆಂಬುದನ್ನು ಯೆಹೋವನು ನನಗೆ ತೋರಿಸಿಕೊಟ್ಟಿದ್ದಾನೆ. ಯೆಹೋವನು ನನಗೆ ಹೀಗೆ ಹೇಳಿದ್ದಾನೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತಾವು ಶತ್ರುವನ್ನು ಮರೆಹೋಗೆನು ಎನ್ನುವುದಾದರೆ ಸರ್ವೇಶ್ವರ ತಮ್ಮ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ನೀನು - ಶತ್ರುವನ್ನು ಮರೆಹೊಗೆನು ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ನೀನು ಶರಣಾಗತಿಯನ್ನು ನಿರಾಕರಿಸಿದರೆ, ಯೆಹೋವ ದೇವರು ನನಗೆ ತೋರಿಸಿದ ಮಾತು ಇದೇ: ಅಧ್ಯಾಯವನ್ನು ನೋಡಿ |
ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’