23 “ನಿನ್ನ ಎಲ್ಲಾ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೊರತರಲಾಗುವುದು. ಅವರನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಬಾಬಿಲೋನಿನ ರಾಜನು ನಿನ್ನನ್ನು ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು.
23 ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.
23 ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.
23 ನಿನ್ನ ಸಮಸ್ತ ಪತ್ನಿಯರೂ ಕುಮಾರಕುಮಾರ್ತೆಯರೂ ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿವಿುತ್ತ ಬೆಂಕಿಯಿಂದ ಸುಟ್ಟುಹೋಗುವದು ಎಂದು ಹೇಳಿದನು.
23 “ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.
ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.
ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣೆದುರಿನಲ್ಲಿಯೇ ಅವನ ಗಂಡುಮಕ್ಕಳನ್ನು ಕೊಲ್ಲಿಸಿದನು. ಚಿದ್ಕೀಯನು ನೋಡುತ್ತಿದ್ದಂತೆಯೇ ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ರಾಜಾಧಿಕಾರಿಗಳನ್ನು ಕೊಲ್ಲಿಸಿದನು.
ಆದರೆ ನೀನು ಬಾಬಿಲೋನಿನ ಅಧಿಕಾರಿಗಳಿಗೆ ಶರಣಾಗತನಾಗಲು ಒಪ್ಪದ್ದಿದ್ದರೆ, ಜೆರುಸಲೇಮನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನ್ನು ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.’”
ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.
ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು.
ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” ಇದು ಯೆಹೋವನ ಸಂದೇಶ.
ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.
ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”
ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.’” ಇದು ಯೆಹೋವನಿಂದ ಬಂದ ಸಂದೇಶ. “‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’”
ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ.