ಯೆರೆಮೀಯ 38:26 - ಪರಿಶುದ್ದ ಬೈಬಲ್26 ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನ್ನನ್ನು ಮತ್ತೆ ಕಳುಹಿಸಬೇಡಿ, ಅಲ್ಲಿಗೆ ಹೋದರೆ ನಾನು ಸತ್ತುಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ’” ಎಂದು ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ಮರಳಿ ಸೇರಿಸಬೇಡ. ಅಲ್ಲೇ ಸತ್ತೇನು ಎಂದು ಅರಸನಲ್ಲಿ ಬಿನ್ನಹ ಮಾಡಿಕೊಂಡೆ’ ಎಂಬುದಾಗಿ ಹೇಳು,” ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀನು ಅವರಿಗೆ - ಯೆಹೋನಾಥಾನನ ಮನೆಗೆ ನನ್ನನ್ನು ತಿರಿಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು ಎಂಬದಾಗಿ ಹೇಳು ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನೀನು ಅವರಿಗೆ, ‘ನನ್ನನ್ನು ತಿರುಗಿ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯುವ ಹಾಗೆ ತೆಗೆದುಕೊಂಡು ಹೋಗಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು,’ ಎಂದು ಹೇಳಿದನು.” ಅಧ್ಯಾಯವನ್ನು ನೋಡಿ |
ಯೆಹೂದ್ಯರನ್ನು ಕೊಲ್ಲಬೇಕೆಂಬುವ ಅರಸನ ಆಜ್ಞಾಪತ್ರದ ಒಂದು ಪ್ರತಿಯನ್ನು ಹತಾಕನ ಕೈಯಲ್ಲಿ ಮೊರ್ದೆಕೈ ಕೊಟ್ಟನು. ಈ ಆಜ್ಞಾಪತ್ರವನ್ನು ಶೂಷನ್ ನಗರದ ಎಲ್ಲೆಡೆಯಲ್ಲಿಯೂ ಕಳುಹಿಸಲ್ಪಟ್ಟಿತ್ತು. ಹತಾಕನು ಆ ಪ್ರತಿಯನ್ನು ಎಸ್ತೇರಳಿಗೆ ತೋರಿಸಿ ಎಲ್ಲವನ್ನು ವಿವರಿಸಬೇಕೆಂದು ಮೊರ್ದೆಕೈ ಉದ್ದೇಶಿಸಿದನು. ಅಷ್ಟೇ ಅಲ್ಲ. ಎಸ್ತೇರ್ ರಾಣಿ ಅರಸನ ಬಳಿಗೆ ಹೋಗಿ ತನಗೂ ಆಕೆಯ ಜನರಿಗೂ ದಯೆ ತೋರಿಸಲು ಅರಸನೊಡನೆ ಬೇಡಲಿ ಎಂದು ಹತಾಕನೊಡನೆ ಹೇಳಿ ಕಳುಹಿಸಿದನು.