Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:4 - ಪರಿಶುದ್ದ ಬೈಬಲ್‌

4 ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಮೇಲೆ ಆ ಪ್ರಧಾನರು ಅರಸನಿಗೆ - ಒಡೆಯಾ, ಇವನಿಗೆ ಮರಣದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ನುಡಿಯುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:4
25 ತಿಳಿವುಗಳ ಹೋಲಿಕೆ  

ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”


ಆ ಜನರು ಪೌಲ ಸೀಲರನ್ನು ನ್ಯಾಯಾಧೀಶರ ಬಳಿಗೆ ತಂದು, “ಈ ಜನರು ಯೆಹೂದ್ಯರು. ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.


ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.


ಅಂತೆಯೇ, ನಾನು ನಿಮ್ಮನ್ನು ಕಳುಹಿಸಿದ ನಗರಕ್ಕೆ ಒಳ್ಳೆಯದನ್ನು ಮಾಡಿರಿ. ನೀವು ವಾಸಮಾಡುತ್ತಿರುವ ನಗರಕ್ಕಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಏಕೆಂದರೆ ಆ ನಗರದಲ್ಲಿ ನೆಮ್ಮದಿಯಿದ್ದರೆ ನಿಮಗೂ ನೆಮ್ಮದಿ ಸಿಗುವುದು.”


ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು.


ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.


ಆದರೆ ಈಜಿಪ್ಟಿನ ರಾಜನು ಅವರಿಗೆ, “ಮೋಶೆ ಆರೋನರೇ, ನೀವು ಕೆಲಸಗಾರರಿಗೆ ತೊಂದರೆ ಮಾಡುತ್ತಿದ್ದೀರಿ, ಅವರು ತಮ್ಮ ಕೆಲಸ ಮಾಡಲಿ! ನೀವು ನಿಮ್ಮ ಕೆಲಸವನ್ನು ಮಾಡಿ!


ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.


ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!


ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.


“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.


ಆದರೆ ಅವರು ಜೆಕರ್ಯನ ವಿರೋಧವಾಗಿ ಒಳಸಂಚು ಮಾಡಿದರು. ಅವನನ್ನು ಕೊಲ್ಲಲು ಅರಸನು ಅವರಿಗೆ ಆಜ್ಞಾಪಿಸಿದನು. ಆಗ ಅವರು ಅವನನ್ನು ದೇವಾಲಯದ ಅಂಗಳದಲ್ಲಿಯೇ ಕಲ್ಲೆಸೆದು ಕೊಂದರು.


ಅನಾತೋತಿನ ಜನರು ಯೆರೆಮೀಯನನ್ನು ಕೊಲೆ ಮಾಡಬೇಕೆಂದು ಯೋಚಿಸುತ್ತಿದ್ದರು. ಆ ಜನರು ಯೆರೆಮೀಯನಿಗೆ, “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಬೇಡ, ನೀನು ಹಾಗೆ ಮಾಡಿದರೆ ನಾವು ನಿನ್ನ ಕೊಲೆ ಮಾಡುವೆವು” ಎಂದರು. ಅನಾತೋತಿನ ಆ ಜನರ ಬಗ್ಗೆ ಯೆಹೋವನು ಒಂದು ನಿರ್ಣಯವನ್ನು ತೆಗೆದುಕೊಂಡನು.


ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ. ಅವರ ಅಪರಾಧಗಳನ್ನು ಮನ್ನಿಸಬೇಡ. ಅವರ ಪಾಪಗಳನ್ನು ಅಳಿಸಬೇಡ. ನನ್ನ ವೈರಿಗಳನ್ನು ನಾಶಪಡಿಸು, ನೀನು ಕೋಪದಲ್ಲಿದ್ದಾಗ ಆ ಜನರನ್ನು ಶಿಕ್ಷಿಸು.


ಆದರೆ ರಾಜನಾದ ಚಿದ್ಕೀಯನು ಯೆರೆಮೀಯನಿಗೆ ರಹಸ್ಯವಾಗಿ, “ಯೆರೆಮೀಯನೇ, ನಮಗೆ ಉಸಿರನ್ನೂ ಜೀವವನ್ನೂ ದಯಪಾಲಿಸಿದ ಯೆಹೋವನ ಆಣೆಯಾಗಿ ಹೇಳುತ್ತೇನೆ, ನಾನು ನಿನ್ನನ್ನು ಕೊಲ್ಲುವುದಿಲ್ಲ. ಕೊಲ್ಲಬಯಸುವ ಅಧಿಕಾರಿಗಳ ಕೈಗೂ ನಿನ್ನನ್ನು ಕೊಡುವದಿಲ್ಲವೆಂದು ನಾನು ಮಾತು ಕೊಡುತ್ತೇನೆ” ಎಂದು ಹೇಳಿದನು.


ನಾನು ನಿನ್ನೊಂದಿಗೆ ಮಾತನಾಡಿದ್ದನ್ನು ಆ ಅಧಿಕಾರಿಗಳು ಪತ್ತೆ ಹಚ್ಚಬಹುದು. ಅವರು ನಿನ್ನ ಹತ್ತಿರ ಬಂದು, ‘ಯೆರೆಮೀಯನೇ, ನೀನು ರಾಜನಾದ ಚಿದ್ಕೀಯನಿಗೆ ಏನು ಹೇಳಿದೆ? ಚಿದ್ಕೀಯನು ನಿನಗೆ ಏನು ಹೇಳಿದನು? ಪ್ರಾಮಾಣಿಕವಾಗಿ ಎಲ್ಲವನ್ನು ನಮಗೆ ಹೇಳು; ಇಲ್ಲವಾದರೆ ನಾವು ನಿನ್ನನ್ನು ಕೊಂದುಬಿಡುತ್ತೇವೆ’ ಎನ್ನಬಹುದು.


ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಬಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಬುದು ನಮ್ಮ ಆಲೋಚನೆ. ಅವನು ನಮ್ಮನ್ನು ಬಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಬಯಸುತ್ತಾನೆ ಅಥವಾ ಅವರು ನಮ್ಮನ್ನು ಸೆರೆಹಿಡಿದು ಬಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಬಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು