Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:6 - ಪರಿಶುದ್ದ ಬೈಬಲ್‌

6 ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಧಿಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸ್ವಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:6
19 ತಿಳಿವುಗಳ ಹೋಲಿಕೆ  

ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.


ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’


ಅವರು ಯೆರೆಮೀಯನನ್ನು ಯೆಹೋನಾಥಾನನ ನೆಲಮನೆಯ ಒಂದು ಕೋಣೆಯಲ್ಲಿಟ್ಟರು. ಆ ಕೋಣೆಯು ನೆಲಮನೆಯ ಕೆಳಭಾಗದಲ್ಲಿತ್ತು. ಯೆರೆಮೀಯನು ಅಲ್ಲಿ ಬಹಳ ದಿವಸಗಳವರೆಗೆ ಇದ್ದನು.


ನಿಂತುಕೊಳ್ಳಲು ನೆಲೆ ಸಿಕ್ಕುತ್ತಿಲ್ಲ; ಆಳವಾದ ಮರಳಿನೊಳಕ್ಕೆ ಮುಳುಗಿಹೋಗುತ್ತಿದ್ದೇನೆ. ನಾನು ಆಳವಾದ ನೀರಿನಲ್ಲಿದ್ದೇನೆ. ಅಲೆಗಳು ನನ್ನನ್ನು ಆವರಿಸಿಕೊಳ್ಳುತ್ತಿವೆ.


ಆದ್ದರಿಂದ ಸೆರೆಮನೆಯ ಅಧಿಕಾರಿಯು ಅವರನ್ನು ಸೆರೆಮನೆಯ ಒಳಕೋಣೆಗೆ ಹಾಕಿಸಿ, ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.


ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.


ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು.


ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


ನೀರಿಲ್ಲದ ಒಂದು ಬಾವಿಯೊಳಗೆ ತಳ್ಳಿದರು.


ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.


ಅವರು ಯೆರೆಮೀಯನನ್ನು ಹಗ್ಗದಿಂದ ಮೇಲಕ್ಕೆ ಎಳೆದು ಬಾವಿಯಿಂದ ಹೊರತೆಗೆದರು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಿಸಿದನು.


ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು